Jatayu Newspaper
ಸ್ಟಿಂಗ್ ಆಪರೇಷನ್ ವಿಚಾರ ಪ್ರಸ್ತಾಪಿಸಿದ್ದು ಡಿಕೆ.ಶಿವಕುಮಾರ್, ತನಿಖೆಯಾಗದಿದ್ದರೆ ಅವರ ಮೇಲೆಯೇ ಅನುಮಾನ: ಸಂಸದ ಬೊಮ್ಮಾ ಸ್ಟಿಂಗ್ ಆಪರೇಷನ್ ವಿಚಾರ ಪ್ರಸ್ತಾಪಿಸಿದ್ದು ಡಿಕೆ.ಶಿವಕುಮಾರ್, ತನಿಖೆಯಾಗದಿದ್ದರೆ ಅವರ ಮೇಲೆಯೇ ಅನುಮಾನ: ಸಂಸದ ಬೊಮ್ಮಾಯಿ
Saturday, 17 Oct 2026 05:30 am
Jatayu Newspaper

Jatayu Newspaper

ಗದಗ: ಸ್ಟಿಂಗ್ ಆಪರೇಷನ್ ವಿಚಾರ ಪ್ರಸ್ತಾಪಿಸಿದ್ದು ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಹೀಗಾಗಿ ಸತ್ಯಾಸತ್ಯತೆ ಬಯಲಿಗೆಳೆಯಲು ತನಿಖೆ ನಡೆಸುವುದು ಅತ್ಯಗತ್ಯ.

ಇಲ್ಲದಿದ್ದರೆ, ಮುಖ್ಯಮಂತ್ರಿಗಳ ಮೇಲೆಯೇ ಅನುಮಾನ ಹೆಚ್ಚಾಗುತ್ತದೆ ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವನ್ನು ಸ್ವತಃ ಮುಖ್ಯಮಂತ್ರಿಯವರೇ ಪ್ರಸ್ತಾಪಿಸಿದ್ದು, ತನಿಖೆ ನಡೆಸದಿದ್ದರೆ ಸಹಜವಾಗಿಯೇ ಅನುಮಾನದ ಮುಳ್ಳು ಅವರತ್ತಲೇ ತಿರುಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಸ್ಟಿಂಗ್ ಆಪರೇಷನ್ ವಿಚಾರವನ್ನು ಮುಖ್ಯಮಂತ್ರಿಯವರೇ ಪ್ರಸ್ತಾಪಿಸಿರುವುದರಿಂದ ಸತ್ಯವನ್ನು ಹೊರತರಲು ಅದನ್ನು ಗಂಭೀರವಾಗಿ ಪರಿಗಣಿಸಬೇಕು.

ಕೇವಲ ಹೇಳಿಕೆ ನೀಡಿ, ಆರಾಮವಾಗಿ ಓಡಾಡಿಕೊಂಡು ಜೀವನ ನಡೆಸಿದರೆ ಸಾಲದು.

ಇದು ಅತ್ಯಂತ ಗಂಭೀರವಾದ ವಿಚಾರ.

ಈಗ ಈ ವಿಚಾರದಲ್ಲಿ ಮೌನ ವಹಿಸಿದರೆ ಅವರ ಸಹೋದ್ಯೋಗಿಗಳ ಪರಿಸ್ಥಿತಿ ಏನಾಗಬಹುದು?

ಹೀಗಾಗಿ ಡಿಕೆ.ಶಿವಕುಮಾರ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲೇಬೇಕು ಎಂದು ಒತ್ತಾಯಿಸಿದರು.ಇದೇ ವೇಳೆ ಕಾಂಗ್ರೆಸ್ ಸರ್ಕಾರ ಮತ್ತು ಆ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಅರಾಜಕತೆಯನ್ನು ಹರಡಲಾಗುತ್ತಿದೆ.

ಪ್ರತಿಯೊಂದು ವಿಚಾರದಲ್ಲೂ ಸಮಗ್ರ ತನಿಖೆ ನಡೆಯಬೇಕು ಮತ್ತು ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು.

ಮೇಲ್ನೋಟಕ್ಕೆ ತನಿಖೆ ಆರಂಭಿಸಿ ಬಳಿಕ ಸುಮ್ಮನಾಗುವ ಬದಲು, ತಪ್ಪು ಮಾಡಿದವರಿಗೆ ಕಾನೂನಿನ ಅನ್ವಯ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅಭಿಪ್ರಾಯಪಟ್ಟರು..ಸ್ಟಿಂಗ್ ಆಪರೇಷನ್ CM ಟಾರ್ಗೆಟ್: ಬೆಂಬಲಕ್ಕೆ ಬಾರದ ಸಂಪುಟ ಸಹೋದ್ಯೋಗಿಗಳು; ಹೋರಾಟದಲ್ಲಿ ಏಕಾಂಗಿಯಾದ್ರಾ ಶಿವಕುಮಾರ್?.ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸೋಲಿನ ಹತಾಶೆಯಿಂದ ಕಾಂಗ್ರೆಸ್ ಚುನಾವಣಾ ಆಯೋಗ ಮತ್ತು ವಿದ್ಯುನ್ಮಾನ ಮತಯಂತ್ರಗಳ (EVM) ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.ಕಾಂಗ್ರೆಸ್ ಮತ್ತು ಸಿಜೆಪಿ ಒಂದೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಸಿಜೆಪಿಯ ಮಟ್ಟಕ್ಕೆ ಇಳಿದಿದೆ.


Source: https://www.kannadaprabha.com/politics/2026/Oct/17/cm-brought-it-up-so-he-must-get-it-probed-bommai-on-sting-operation